KSDA Recruitment 2024:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದ ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತೆ 945 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವ ಅಭ್ಯರ್ಥಿಗಳು ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಹಾಗಾಗಿ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ
ಸ್ನೇಹಿತ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಸರ್ಕಾರಿ ನೌಕರಿ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗ ಮತ್ತು ಇತರ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿಗಾಗಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ನಮ್ಮ ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಕೃಷಿ ಇಲಾಖೆಯ (KSDA Recruitment 2024) ನೇಮಕಾತಿ..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ಲೋಕಸೇವಾ ಆಯೋಗ ನಮ್ಮ ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ 945 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ

ಹೌದು ಸ್ನೇಹಿತರೆ, ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದರಲ್ಲಿ ನಮ್ಮ ಕಲ್ಯಾಣ ಕರ್ನಾಟಕ ಭಾಗದವರಿಗೆ ಅಥವಾ ಹೈದರಾಬಾದ್ ಕರ್ನಾಟಕದವರಿಗೆ 273 ಹುದ್ದೆಗಳು ಮೀಸಲಾಗಿ ಇಡಲಾಗಿದೆ ಹಾಗಾಗಿ ಇದು ಹೈದರಾಬಾದ್ ಕರ್ನಾಟಕದ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್
ಕೃಷಿ ಇಲಾಖೆಯ (KSDA Recruitment 2024) ಹುದ್ದೆಗಳ ವಿವರ..?
ನೇಮಕಾತಿ ಸಂಸ್ಥೆ:- ಕರ್ನಾಟಕ ಲೋಕಸೇವಾ ಆಯೋಗ
ಒಟ್ಟು ಹುದ್ದೆಗಳ ಸಂಖ್ಯೆ:- 945
HK ಹುದ್ದೆಗಳ ಸಂಖ್ಯೆ:- 273
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 07/11/2024
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಹುದ್ದೆಗಳ ಹೆಸರು ಮತ್ತು ಹುದ್ದೆಗಳ ಸಂಖ್ಯೆ:-
ಕೃಷಿ ಅಧಿಕಾರಿಗಳು :- 128 ಹುದ್ದೆಗಳು
ಸಹಾಯಕ ಕೃಷಿ ಅಧಿಕಾರಿಗಳು:- 817 ಹುದ್ದೆಗಳು
ಕೃಷಿ ಇಲಾಖೆಯ ಹುದ್ದೆಗಳಿಗೆ (KSDA Recruitment 2024) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಹೌದು ಸ್ನೇಹಿತರೆ, ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಕೃಷಿ ಇಲಾಖೆಯ 945 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ನಿಗದಿ ಮಾಡಲಾಗಿದ್ದು ಅಭ್ಯರ್ಥಿಗಳು B.SC, B.Tech ವಿದ್ಯಾಭ್ಯಾಸ ಪೂರ್ಣಗೊಳಿಸಬೇಕು ಮತ್ತು ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಅರ್ಜಿ ಶುಲ್ಕ:- ಸ್ನೇಹಿತರ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಕೃಷಿ ಇಲಾಖೆಯ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹600/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹300/- ಮತ್ತು ಮಾಜಿ ಸೈನಿಕರಿಗೆ ₹50/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ವಯೋಮಿತಿ:- ಸ್ನೇಹಿತರ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಕೃಷಿ ಇಲಾಖೆಯ 945 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 38 ವರ್ಷದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 43 ವರ್ಷ ಗರಿಷ್ಠ ವಯಸ್ಸು ಹಾಗೂ ಹಿಂದುಳಿದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 41 ವರ್ಷ ಆಗಿದೆ
ಸಂಬಳ:- ಸ್ನೇಹಿತರೆ ಕೃಷಿ ಇಲಾಖೆಯ 945 ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ ₹43,000 ಇಂದ ಗರಿಷ್ಠ ₹83,000 ವರೆಗೆ ಸಂಬಳ ಪಡೆಯಬಹುದಾಗಿದೆ ಅಥವಾ ನೀಡಲಾಗುತ್ತದೆ
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:-
1) ಅರ್ಜಿ ಪ್ರಾರಂಭ ದಿನಾಂಕ:- 07/10/2024
2) ಅರ್ಜಿ ಕೊನೆಯ ದಿನಾಂಕ:- 07/11/2024
ಅರ್ಜಿ ಸಲ್ಲಿಸುವುದು ಹೇಗೆ (KSDA Recruitment 2024)..?
ಸ್ನೇಹಿತರ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಕೃಷಿ ಇಲಾಖೆಯ 945 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ಕೃಷಿ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತ ಯಾವುದಾದರು ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಕೃಷಿ ಇಲಾಖೆಯ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಕೆಳಗಡೆ ಲಿಂಕ್ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ